ಆದಿಕಾಂಡ 50:5 - ಕನ್ನಡ ಸಮಕಾಲಿಕ ಅನುವಾದ5 ‘ನನಗೆ ನನ್ನ ತಂದೆ, “ನಾನು ಸಾಯುತ್ತೇನೆ, ನಾನು ಕಾನಾನ್ ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಸಮಾಧಿಮಾಡಬೇಕು,” ಎಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.’ ಹೀಗಿರುವುದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಳಿ, ತಿರುಗಿ ಬರುವ ಹಾಗೆ ಅಪ್ಪಣೆಯಾಗಬೇಕು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ತಂದೆಯವರು ತಾವು ಕಾನಾನ್ ನಾಡಿನಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತಮಗೆ ಸಮಾಧಿಮಾಡಬೇಕೆಂದು ಸಾಯುವುದಕ್ಕೆ ಮೊದಲೇ ನನ್ನಿಂದ ಪ್ರಮಾಣ ಮಾಡಿಸಿದರು. ಆದ್ದರಿಂದ ನಾನು ಹೋಗಿ ತಂದೆಯನ್ನು ಸಮಾಧಿಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ವಿನಂತಿಸುತ್ತಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ‘ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ’ ಎಂದು ತಿಳಿಸಿರಿ” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿ |