ಆದಿಕಾಂಡ 6:16 - ಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿ ಇಡು, ಪಕ್ಕದಲ್ಲಿ ಬಾಗಿಲಿರಲಿ; ಒಂದರ ಮೇಲೆ ಒಂದರಂತೆ ನಾವೆಯಲ್ಲಿ ಮೂರು ಅಂತಸ್ತುಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಬೆಳಕು ಕಂಡಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ. ಅಧ್ಯಾಯವನ್ನು ನೋಡಿ |