Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:17 - ಕನ್ನಡ ಸಮಕಾಲಿಕ ಅನುವಾದ

17 ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನಂತೂ ಭೂವಿುಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವೆನು; ಭೂವಿುಯಲ್ಲಿರುವ ಸಮಸ್ತವೂ ಲಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:17
33 ತಿಳಿವುಗಳ ಹೋಲಿಕೆ  

ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ಏಳು ದಿವಸಗಳಾದ ಮೇಲೆ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳು ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಪ್ರತಿಯೊಂದು ಜೀವರಾಶಿಯನ್ನೂ ಭೂಮಿಯ ಮೇಲಿಂದ ಅಳಿಸಿಬಿಡುತ್ತೇನೆ,” ಎಂದರು.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು.


ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.


‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


“ಇದು ನನಗೆ ನೋಹನ ಕಾಲದ ಪ್ರಳಯದಂತಿದೆ. ನೋಹನ ಕಾಲದ ಪ್ರಳಯವು ಪುನಃ ಭೂಮಿಯನ್ನು ಆವರಿಸುವುದಿಲ್ಲ ಎಂದು ನಾನು ಪ್ರಮಾಣ ಮಾಡಿದ ಹಾಗೆಯೇ, ಇನ್ನು ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ, ನಿನ್ನನ್ನು ಗದರಿಸುವುದಿಲ್ಲ, ಎಂದು ಪ್ರಮಾಣ ಮಾಡಿದ್ದೇನೆ.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.


ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.


ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.


“ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ


ನಲವತ್ತು ದಿನ ಭೂಮಿಯ ಮೇಲೆ ಪ್ರಳಯವು ಬಂದು, ನೀರು ಹೆಚ್ಚಿ ನಾವೆಯನ್ನು ಮೇಲಕ್ಕೆ ಎತ್ತಲು ಅದು ಭೂಮಿಯಿಂದ ತೇಲಾಡಿತು.


ಹೀಗೆ ಜೀವಶ್ವಾಸವಿರುವ ಎಲ್ಲಾ ಸೃಷ್ಟಿಗಳಲ್ಲಿ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು