Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:18 - ಕನ್ನಡ ಸಮಕಾಲಿಕ ಅನುವಾದ

18 ಆದರೆ ನಾನು ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀನು, ನಿನ್ನ ಸಂಗಡ ನಿನ್ನ ಮಕ್ಕಳು, ನಿನ್ನ ಹೆಂಡತಿ ಹಾಗೂ ಸೊಸೆಯರು ನಾವೆಯೊಳಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ನಿನ್ನೊಡನೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ನೀನು ಹೆಂಡತಿ, ಮಕ್ಕಳು ಹಾಗೂ ಸೊಸೆಯರ ಸಮೇತ ನಾವೆಯನ್ನು ಹತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ನಿನ್ನ ಕೂಡ ನನ್ನ ನಿಬಂಧನೆಯನ್ನು ಮಾಡುತ್ತೇನೆ. ನೀನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:18
11 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಆಗ ನೋಹನು ಪ್ರಳಯದ ನಿಮಿತ್ತವಾಗಿ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯಲ್ಲಿ ಸೇರಿದನು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ಅದೇ ದಿನದಲ್ಲಿ ನೋಹನು ಮತ್ತು ಅವನ ಪುತ್ರರಾದ ಶೇಮ್, ಹಾಮ್, ಯೆಫೆತ್ ಇವರೂ ನೋಹನ ಹೆಂಡತಿಯೂ ಅವನ ಪುತ್ರರ ಹೆಂಡತಿಯರೂ ನಾವೆಯನ್ನು ಪ್ರವೇಶಿಸಿದರು.


ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


ಆದರೆ ಬರುವ ವರ್ಷ ಈ ಕಾಲದಲ್ಲಿ ಸಾರಳು ನಿನ್ನಿಂದ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸವೆನು,” ಎಂದು ಹೇಳಿದರು.


“ನಾನಾದರೋ ಈ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ: ನೀನು ಅನೇಕ ರಾಷ್ಟ್ರಗಳಿಗೆ ತಂದೆಯಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು