Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:2 - ಕನ್ನಡ ಸಮಕಾಲಿಕ ಅನುವಾದ

2 ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-4 ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:2
31 ತಿಳಿವುಗಳ ಹೋಲಿಕೆ  

ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.


ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?


ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು.


ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.


ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.


ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.


ಹೆಂಡತಿಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಸತ್ತಿದ್ದರೆ, ಆಕೆಯು ತನಗೆ ಬೇಕಾದವನನ್ನು ಮದುವೆ ಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಆ ವ್ಯಕ್ತಿಯು ಕರ್ತ ದೇವರಲ್ಲಿ ವಿಶ್ವಾಸಿಯಾಗಿರಬೇಕು.


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


“ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.


ಭೂಮಿಯ ಮೇಲೆ ಜನರ ಸಂಖ್ಯೆ ಹೆಚ್ಚಾಗತೊಡಗಿದಾಗ ಅವರಿಗೆ ಪುತ್ರಿಯರು ಹುಟ್ಟಿದರು.


ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.


ಅವನು ಈಜಿಪ್ಟನ್ನು ಸಮೀಪಿಸುತ್ತಿದ್ದಾಗ, ತನ್ನ ಹೆಂಡತಿ ಸಾರಯಳಿಗೆ, “ನೀನು ನೋಡುವುದಕ್ಕೆ ರೂಪವತಿಯೆಂದು ನನಗೆ ತಿಳಿದಿದೆ.


ಇವರ ದೆಸೆಯಿಂದ ಇಸಾಕನಿಗೂ, ರೆಬೆಕ್ಕಳಿಗೂ ಮನೋವ್ಯಥೆಯಾಯಿತು.


ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು