ಆದಿಕಾಂಡ 6:4 - ಕನ್ನಡ ಸಮಕಾಲಿಕ ಅನುವಾದ4 ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕಾಲದಲ್ಲಿ ಅಂದರೆ ದೇವಪುತ್ರರು ಮನುಷ್ಯಪುತ್ರಿಯರನ್ನು ಕೂಡಿ ಅವರಲ್ಲಿ ಮಕ್ಕಳನ್ನು ಪಡೆಯುವ ಕಾಲದಲ್ಲಿ ಮಹಾಶರೀರಿಗಳು ಭೂವಿುಯ ಮೇಲಿದ್ದರು; ಅನಂತರದಲ್ಲಿಯೂ ಇದ್ದರು. ಪೂರ್ವದಲ್ಲಿ ಹೆಸರುಗೊಂಡ ಪರಾಕ್ರಮಶಾಲಿಗಳು ಇವರೇ. ಅಧ್ಯಾಯವನ್ನು ನೋಡಿ |