Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:6
34 ತಿಳಿವುಗಳ ಹೋಲಿಕೆ  

ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.


ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಸಮುಯೇಲನು ತಾನು ಸಾಯುವ ದಿವಸದವರೆಗೂ ಸೌಲನನ್ನು ತಿರುಗಿ ಕಾಣಲು ಬರಲಿಲ್ಲ. ಸಮುಯೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಮಾಡಿದ್ದಕ್ಕೋಸ್ಕರ ಯೆಹೋವ ದೇವರು ದುಃಖಪಟ್ಟರು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!


“ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ನಾನು ಅಪನಂಬಿಗಸ್ತರನ್ನು ಕಂಡು ಅಸಹ್ಯಪಡುತ್ತೇನೆ, ಅವರು ನಿಮ್ಮ ಮಾತನ್ನು ಅಂಗೀಕರಿಸುತ್ತಾಯಿಲ್ಲಾ.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.


“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.


ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು