Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ಯೆಹೋವನು - ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂವಿುಯ ಮೇಲಿನಿಂದ ಅಳಿಸಿಬಿಡುವೆನು; ಅದನ್ನು ಉಂಟುಮಾಡಿದ್ದಕ್ಕೆ ನನ್ನಲ್ಲಿ ಪಶ್ಚಾತ್ತಾಪ ಹುಟ್ಟಿತು; ಮನುಷ್ಯರೊಂದಿಗೆ ಸಕಲಮೃಗ ಕ್ರಿವಿುಪಕ್ಷಿಗಳನ್ನೂ ಅಳಿಸಿ ಬಿಡುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:7
21 ತಿಳಿವುಗಳ ಹೋಲಿಕೆ  

“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.


ಏಳು ದಿವಸಗಳಾದ ಮೇಲೆ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳು ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಪ್ರತಿಯೊಂದು ಜೀವರಾಶಿಯನ್ನೂ ಭೂಮಿಯ ಮೇಲಿಂದ ಅಳಿಸಿಬಿಡುತ್ತೇನೆ,” ಎಂದರು.


ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು