Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನೋಹನಿಗೆ ಯೆಹೋವನ ದಯವು ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:8
23 ತಿಳಿವುಗಳ ಹೋಲಿಕೆ  

ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.


ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ.


ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ.


ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.


ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”


ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.


ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.


“ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು