Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:1
26 ತಿಳಿವುಗಳ ಹೋಲಿಕೆ  

ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಅದೇ ದಿನದಲ್ಲಿ ನೋಹನು ಮತ್ತು ಅವನ ಪುತ್ರರಾದ ಶೇಮ್, ಹಾಮ್, ಯೆಫೆತ್ ಇವರೂ ನೋಹನ ಹೆಂಡತಿಯೂ ಅವನ ಪುತ್ರರ ಹೆಂಡತಿಯರೂ ನಾವೆಯನ್ನು ಪ್ರವೇಶಿಸಿದರು.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


“ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.


ಆಗ ನೋಹನು ಪ್ರಳಯದ ನಿಮಿತ್ತವಾಗಿ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯಲ್ಲಿ ಸೇರಿದನು.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆದರೆ ನಾನು ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀನು, ನಿನ್ನ ಸಂಗಡ ನಿನ್ನ ಮಕ್ಕಳು, ನಿನ್ನ ಹೆಂಡತಿ ಹಾಗೂ ಸೊಸೆಯರು ನಾವೆಯೊಳಗೆ ಸೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು