Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:8 - ಕನ್ನಡ ಸಮಕಾಲಿಕ ಅನುವಾದ

8 ಭೂಮುಖದ ಮೇಲೆ ಜಲವು ಕಡಿಮೆಯಾಯಿತೋ ಇಲ್ಲವೋ ಎಂದು ನೋಡುವಂತೆ, ಒಂದು ಪಾರಿವಾಳವನ್ನೂ ಹೊರಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀರು ಇಳಿಯಿತೋ ಇಲ್ಲವೋ ಎಂದು ತಿಳಿದುಕೊಳ್ಳಲು ನೋಹನು ಅನಂತರ ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲಾಗಿ ನೀರು ಇಳಿಯಿತೋ ಇಲ್ಲವೋ ಎಂದು ತಿಳುಕೊಳ್ಳುವದಕ್ಕೆ ನೋಹನು ಪಾರಿವಾಳವನ್ನು ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೆಲ ಒಣಗಿದೆಯೇ, ತೇವವಾಗಿದೆಯೇ ಎಂದು ತಿಳಿದುಕೊಳ್ಳುವುದಕ್ಕಾಗಿ ನೋಹನು ಒಂದು ಪಾರಿವಾಳವನ್ನು ಸಹ ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:8
7 ತಿಳಿವುಗಳ ಹೋಲಿಕೆ  

ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.


ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.


ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು