Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:1 - ಕನ್ನಡ ಸಮಕಾಲಿಕ ಅನುವಾದ

1 ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:1
13 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.


ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.


ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.


ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”


ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.


ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.


ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು