Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:10 - ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಒಂದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪಶುಪಕ್ಷಿಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಸ್ಥಿರಪ್ರತಿಜ್ಞೆ ಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:10
11 ತಿಳಿವುಗಳ ಹೋಲಿಕೆ  

ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.


ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.


ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.


“ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ


ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.”


ಎಲ್ಲಾ ಮೃಗಗಳೂ ಎಲ್ಲಾ ಕ್ರಿಮಿಗಳೂ ಎಲ್ಲಾ ಪಕ್ಷಿಗಳೂ ಭೂಮಿಯಲ್ಲಿ ಹರಿದಾಡುವ ಎಲ್ಲವೂ ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯೊಳಗಿಂದ ಹೊರಗೆ ಬಂದವು.


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು