ಆದಿಕಾಂಡ 9:11 - ಕನ್ನಡ ಸಮಕಾಲಿಕ ಅನುವಾದ11 ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಪ್ರತಿಜ್ಞೆ ಏನೆಂದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಳಯದಿಂದ ನಾಶಮಾಡುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಪ್ರತಿಜ್ಞೆ ಯಾವದೆಂದರೆ - ಇನ್ನು ಮೇಲೆ ಎಲ್ಲಾ ಪ್ರಾಣಿಗಳು ಪ್ರಳಯದಿಂದ ನಾಶವಾಗುವದಿಲ್ಲ; ಇನ್ನು ಮುಂದೆ ಭೂವಿುಯನ್ನು ಹಾಳು ಮಾಡುವ ಪ್ರಳಯವು ಬರುವದೇ ಇಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |