Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:13 - ಕನ್ನಡ ಸಮಕಾಲಿಕ ಅನುವಾದ

13 ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೇಘಗಳಲ್ಲಿ ನಾನಿಟ್ಟಿರುವ ಮುಗಿಲುಬಿಲ್ಲೇ ಗುರುತಾಗಿರುವದು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:13
5 ತಿಳಿವುಗಳ ಹೋಲಿಕೆ  

ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.


ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ:


ನಾನು ಭೂಮಿಯ ಮೇಲೆ ಮೇಘಗಳನ್ನು ಬರಮಾಡುವಾಗ, ಆ ಮಳೆಬಿಲ್ಲು ಮೇಘಗಳಲ್ಲಿ ಕಂಡುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು