Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:21 - ಕನ್ನಡ ಸಮಕಾಲಿಕ ಅನುವಾದ

21 ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಮ್ಮೆ ಅವನು ಕುಡಿದು ಅಮಲೇರಿ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ದ್ರಾಕ್ಷಾರಸವನ್ನು ಕುಡಿಯಲು ಅಮಲೇರಿದ್ದರಿಂದ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:21
13 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.


ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು