Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:3 - ಕನ್ನಡ ಸಮಕಾಲಿಕ ಅನುವಾದ

3 ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಭೂವಿುಯ ಮೇಲೆ ತಿರುಗುವ ಎಲ್ಲಾ ಜೀವಜಂತುಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಪೈರುಗಳನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:3
18 ತಿಳಿವುಗಳ ಹೋಲಿಕೆ  

ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿಮ್ಮ ಇಷ್ಟಾನುಸಾರ ಮಾಂಸಾಹಾರವನ್ನು ನಿಮ್ಮ ಎಲ್ಲಾ ಊರುಗಳಲ್ಲಿ ತಿನ್ನಬಹುದು. ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.


ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.


ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.


ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.


ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು