ಆಮೋಸ 1:1 - ಕನ್ನಡ ಸಮಕಾಲಿಕ ಅನುವಾದ1 ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು. ಅಧ್ಯಾಯವನ್ನು ನೋಡಿ |