ಆಮೋಸ 1:14 - ಕನ್ನಡ ಸಮಕಾಲಿಕ ಅನುವಾದ14 ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು. ಅಧ್ಯಾಯವನ್ನು ನೋಡಿ |