Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:2 - ಕನ್ನಡ ಸಮಕಾಲಿಕ ಅನುವಾದ

2 ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:2
23 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.


“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.


ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.


ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.


ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”


“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.


ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.


ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು