Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಇಂತೆನ್ನುತ್ತಾನೆ - ದಮಸ್ಕವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:3
26 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.


ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.


ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.


ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:


ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ.


ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.


ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಿಸಿಕೊಂಡು, ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಯಲ್ಲಿಯೂ, ಹಜಾಯೇಲನ ಮಗ ಬೆನ್ಹದದನ ಕೈಯಲ್ಲಿಯೂ ಬಹುಕಾಲ ಒಪ್ಪಿಸಿದರು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.


ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.


ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.


ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು