ಆಮೋಸ 1:5 - ಕನ್ನಡ ಸಮಕಾಲಿಕ ಅನುವಾದ5 ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ದಮಸ್ಕದ ಲಾಳವಂಡಿಗೆಯನ್ನು ಮುರಿದು ಆವೆನ್ ತಗ್ಗಿನೊಳಗಿಂದ ಸಿಂಹಾಸನಾಸೀನನನ್ನೂ ಬೇತ್ ಎದೆನಿನಿಂದ ರಾಜದಂಡಧಾರಿಯನ್ನೂ ನಿರ್ಮೂಲಮಾಡುವೆನು; ಅರಾಮ್ಯರು ಕೀರಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿ |