Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:8 - ಕನ್ನಡ ಸಮಕಾಲಿಕ ಅನುವಾದ

8 ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:8
17 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.


ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಿಸುವರು. ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.


ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.


ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.


ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:


“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.


ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.


ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.


ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು