ಆಮೋಸ 1:9 - ಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿ |