Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:11 - ಕನ್ನಡ ಸಮಕಾಲಿಕ ಅನುವಾದ

11 “ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ಪುತ್ರರಲ್ಲಿ ಕೆಲವರನ್ನು ಪ್ರವಾದಿಗಳನ್ನಾಗಿ, ನಿಮ್ಮ ಯುವಜನರಲ್ಲಿ ಕೆಲವರನ್ನು ನಾಜೀರರನ್ನಾಗಿ ಸಿದ್ಧಪಡಿಸಿದವನು ನಾನೇ. ಇಸ್ರಯೇಲಿನ ಜನರೇ, ಇದು ನಿಜವಲ್ಲವೇ? ನೀವೇ ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಸಿದ್ಧಪಡಿಸಿದೆನು. ಇಸ್ರಾಯೇಲ್ಯರೇ, ಇದು ಸತ್ಯವಲ್ಲವೋ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:11
34 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು.


“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.


ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.


ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.


ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,


“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.


“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.


ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.


ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು.


ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು