ಆಮೋಸ 2:13 - ಕನ್ನಡ ಸಮಕಾಲಿಕ ಅನುವಾದ13 “ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.