Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:7 - ಕನ್ನಡ ಸಮಕಾಲಿಕ ಅನುವಾದ

7 ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಡವನು ತಲೆಯ [ಮೇಲೆ ಎರಚಿಕೊಂಡ] ನೆಲದ ದೂಳನ್ನೂ ಆತುರವಾಗಿ ಆಶಿಸುತ್ತಾರೆ; ದೀನರ ದಾರಿಗೆ ಅಡ್ಡಿಹಾಕುತ್ತಾರೆ; ಮಗನೂ ತಂದೆಯೂ ಒಬ್ಬಳಲ್ಲೇ ಹೋಗಿ ನನ್ನ ಪವಿತ್ರನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:7
24 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.


ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.


ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.


ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.


ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


ಪವಿತ್ರ ವೇದದಲ್ಲಿ ಬರೆದಿರುವಂತೆ, “ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದವರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆ.”


ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.


ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.


“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.


ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.


ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.


“ ‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.


“ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.


“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.


ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು