Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:11 - ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರಲು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ: “ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು. ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು, ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು, ನಿನ್ನ ಅರಮನೆಗಳು ಸೂರೆಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:11
17 ತಿಳಿವುಗಳ ಹೋಲಿಕೆ  

ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.


ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.


ಅವನಿಗೆ ಆಹಾರವು ಉಳಿಯದು; ಆದ್ದರಿಂದ ಅವನ ಸಮೃದ್ಧಿಯು ಅಸ್ಥಿರವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು