ಆಮೋಸ 3:14 - ಕನ್ನಡ ಸಮಕಾಲಿಕ ಅನುವಾದ14 “ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು. ಅಧ್ಯಾಯವನ್ನು ನೋಡಿ |
ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.