ಆಮೋಸ 3:8 - ಕನ್ನಡ ಸಮಕಾಲಿಕ ಅನುವಾದ8 ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.