Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:9 - ಕನ್ನಡ ಸಮಕಾಲಿಕ ಅನುವಾದ

9 ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಷ್ಡೋದಿನ ಅರಮನೆಗಳಲ್ಲಿಯೂ ಐಗುಪ್ತದೇಶದ ಸೌಧಗಳಲ್ಲಿಯೂ ಹೀಗೆ ಪ್ರಕಟಿಸಿರಿ - ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ, ಪಟ್ಟಣದೊಳಗೆ ಎಷ್ಟೆಷ್ಟೋ ಗದ್ದಲಗಳೂ ಹಿಂಸೆಗಳೂ ನಡೆಯುತ್ತವೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:9
22 ತಿಳಿವುಗಳ ಹೋಲಿಕೆ  

ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!


ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.


ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.


ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.


“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು ಕೊಳ್ಳೆಹೊಡೆದು ನಮ್ಮ ಮನೆಗಳನ್ನು ತುಂಬಿಕೊಳ್ಳೋಣ;


ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.


ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು, ಭಯಂಕರ ಆಳ್ವಿಕೆಯನ್ನು ಹತ್ತಿರ ಮಾಡಿಕೊಳ್ಳುತ್ತೀರಿ.


ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು