ಆಮೋಸ 4:1 - ಕನ್ನಡ ಸಮಕಾಲಿಕ ಅನುವಾದ1 ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.