ಆಮೋಸ 4:2 - ಕನ್ನಡ ಸಮಕಾಲಿಕ ಅನುವಾದ2 “ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು - ಇಗೋ, ನಿಮ್ಮನ್ನು ಕೊಂಡಿಗಳಿಂದಲೂ ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿ |
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.