Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:7 - ಕನ್ನಡ ಸಮಕಾಲಿಕ ಅನುವಾದ

7 “ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:7
27 ತಿಳಿವುಗಳ ಹೋಲಿಕೆ  

ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.


ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ನೀವು, ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುತ್ತದೆ’ ಎಂದು ಹೇಳುವುದಿಲ್ಲವೇ? ಮತ್ತು ಇಗೋ, ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ. ಏಕೆಂದರೆ ಅವು ಈಗಾಗಲೇ ಸುಗ್ಗಿಗೆ ಸಿದ್ಧವಾಗಿವೆ.


ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.


“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ, ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿನಗಳವರೆಗೆ ಘೋರವಾದ ಕತ್ತಲೆ ಕವಿಯಿತು.


ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು