Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:9 - ಕನ್ನಡ ಸಮಕಾಲಿಕ ಅನುವಾದ

9 “ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮನ್ನು ಬೂದಿಯಿಂದಲೂ ಬಿಸಿಗಾಳಿಯಿಂದಲೂ ಬಾಧಿಸಿದೆನು; ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷೆಯ ತೋಟ, ಅಂಜೂರದ ಗಿಡ, ಎಣ್ಣೆಯ ಮರ, ಇವುಗಳನ್ನು ವಿುಡತೆಯು ತಿಂದುಬಿಟ್ಟಿತು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:9
21 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.


ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ನಿಮ್ಮ ಎಲ್ಲಾ ಮರಗಳನ್ನೂ, ನಿಮ್ಮ ಹೊಲದ ಪೈರನ್ನೂ ಮಿಡತೆ ತಿಂದುಬಿಡುವುದು.


ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


“ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, ಪುನಃ ಈಜಿಪ್ಟಿಗೆ ಹಿಂದಿರುಗುವರು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು.


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು