ಆಮೋಸ 5:12 - ಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.