Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ, ಮತ್ತೆ ಏಳಳು; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನೆತ್ತಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:2
27 ತಿಳಿವುಗಳ ಹೋಲಿಕೆ  

“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?


ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.


ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


ರಥಗಳನ್ನು, ಕುದುರೆಗಳನ್ನು, ದಂಡನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ, ದೀಪದ ಬತ್ತಿ ನಂದಿ ಆರಿಹೋಗುವಂತೆಯೂ ಮಾಡಿದಾತನು ಇಂತೆನ್ನುತ್ತಾನೆ:


ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.


ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.


ಅವರು ಏಳದೆ ಇಲ್ಲವೆ ದೇಶವನ್ನು ವಶಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ, ಅವರ ತಂದೆಗಳ ಅಪರಾಧದ ನಿಮಿತ್ತ, ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.


ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.


ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?


ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು