Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:24
11 ತಿಳಿವುಗಳ ಹೋಲಿಕೆ  

ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.


ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು