Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:25 - ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸುತ್ತಿದ್ದಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:25
12 ತಿಳಿವುಗಳ ಹೋಲಿಕೆ  

“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?


ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.


ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು