Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:10 - ಕನ್ನಡ ಸಮಕಾಲಿಕ ಅನುವಾದ

10 ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸುಡಲು ಬಂದ ದಾಯಾದಿಯು ಒಂದು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋಗಬೇಕೆಂದು ಅದನ್ನೆತ್ತಿ - ನಿನ್ನ ಹತ್ತಿರ ಇನ್ನು ಯಾರಾದರೂ ಇದ್ದಾರೋ ಎಂದು ಒಳಮನೆಯಲ್ಲಿರುವವನನ್ನು ಕೇಳುವಾಗ ಅವನು ಇಲ್ಲವೆನ್ನಲು ಇವನು ಯೆಹೋವನ ಹೆಸರನ್ನು ಎತ್ತಾನೆಂದು ದಾಯಾದಿಯು ಭಯಪಟ್ಟು ಸುಮ್ಮನಿರು ಎಂದು ಅವನನ್ನು ತಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:10
11 ತಿಳಿವುಗಳ ಹೋಲಿಕೆ  

“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”


ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು.


ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.


ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.


ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ.


ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.


ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು