ಆಮೋಸ 6:7 - ಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಸೆರೆಗೆ ಕರೆದೊಯ್ಯುವವರಲ್ಲಿ ನೀವು ಮೊದಲಿಗರಾಗಿರುವಿರಿ, ಭೋಗ ಮಾಡುವವರ ಹರ್ಷ ಧ್ವನಿಯು ಗತಿಸಿ ಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಸೆರೆಗೆ ಒಯ್ಯಲ್ಪಡುವವರ ಮುಂದುಗಡೆ ಅವರು ಸೆರೆಗೆ ಹೋಗುವರು; ಒರಗಿಕೊಳ್ಳುವವರ ಹರ್ಷಧ್ವನಿಯು ನಿಂತುಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು. ಅಧ್ಯಾಯವನ್ನು ನೋಡಿ |