ಆಮೋಸ 7:16 - ಕನ್ನಡ ಸಮಕಾಲಿಕ ಅನುವಾದ16 ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ. ಅಧ್ಯಾಯವನ್ನು ನೋಡಿ |