ಆಮೋಸ 7:17 - ಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’” ಅಧ್ಯಾಯವನ್ನು ನೋಡಿ |