ಆಮೋಸ 7:2 - ಕನ್ನಡ ಸಮಕಾಲಿಕ ಅನುವಾದ2 ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.” ಅಧ್ಯಾಯವನ್ನು ನೋಡಿ |