ಆಮೋಸ 7:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. ನಾನು “ಒಂದು ನೂಲುಗುಂಡು,” ಎಂದು ಉತ್ತರಕೊಟ್ಟೆ. ಆಗ ಸ್ವಾಮಿ, “ಇಗೋ,ನನ್ನ ಜನರಾದ ಇಸ್ರಯೇಲಿನ ಮಧ್ಯೆ ನೂಲುಗುಂಡನ್ನು ಹಿಡಿದು ಅವರ ನಡತೆ-ಗೋಡೆ ನೆಟ್ಟಗಿಲ್ಲವೆಂದು ತೋರಿಸುವೆನು. ಅವರನ್ನು ಕಂಡೂ ಕಾಣದಂತಿರದೆ, ದಂಡಿಸಿಯೇ ತೀರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ನಾನು - ಒಂದು ನೂಲುಗುಂಡು ಎಂದು ಉತ್ತರಕೊಟ್ಟೆನು. ಆಗ ಕರ್ತನು - ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಹಿಡಿಯುವೆನು; ಇನ್ನು ಅವರನ್ನು ಕಂಡುಕಾಣದ ಹಾಗಿರೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ನೂಲುಗುಂಡು” ಅಂದೆನು. ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿ |