Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:1 - ಕನ್ನಡ ಸಮಕಾಲಿಕ ಅನುವಾದ

1 ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಇಗೋ, ಮಾಗಿದ ಹಣ್ಣಿನ ಪುಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:1
6 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.


ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.


ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು