ಆಮೋಸ 8:10 - ಕನ್ನಡ ಸಮಕಾಲಿಕ ಅನುವಾದ10 ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.” ಅಧ್ಯಾಯವನ್ನು ನೋಡಿ |