Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಮುದ್ರದಿಂದ ಸಮುದ್ರಕ್ಕೆ, ಬಡಗಲಿಂದ ಮೂಡಲಿಗೆ ಬಳಲುತ್ತಾ ಹೋಗುವರು, ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು; ಆದರೂ ಅದು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೃತ್ಯುಸಮುದ್ರದಿಂದ ಮೆಡಿಟರೇನಿಯನ್ ಸಮುದ್ರದ ತನಕ, ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಯೆಹೋವನ ಸಂದೇಶಕ್ಕಾಗಿ ಹಾತೊರೆಯುತ್ತಾ ಅಲೆದಾಡುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:12
14 ತಿಳಿವುಗಳ ಹೋಲಿಕೆ  

“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.


ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.


ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.


“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.


ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು