Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:2 - ಕನ್ನಡ ಸಮಕಾಲಿಕ ಅನುವಾದ

2 ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:2
25 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.


ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.


ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.


ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು.


ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.


ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.


ಇದಲ್ಲದೆ ಅವರು ನನಗೆ, “ಮನುಷ್ಯಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲ್ಲಾ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.


ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.


ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.


ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು