ಆಮೋಸ 8:3 - ಕನ್ನಡ ಸಮಕಾಲಿಕ ಅನುವಾದ3 “ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.” ಅಧ್ಯಾಯವನ್ನು ನೋಡಿ |